
ಬೆಳ್ತಂಗಡಿ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಬೆಳ್ತಂಗಡಿಯ ಬಿಷಪ್ ಹೌಸ್ ಹಾಗೂ ಮುಂಡಾಜೆಯ ಸೈಂಟ್ ಲಾರೆನ್ಸ್ ಚರ್ಚ್ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಹಾನಿಯ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಳೆಯಿಂದ ಉಂಟಾದ ಹಾನಿ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡ ಶಾಸಕರು, ಅಗತ್ಯ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಭೇಟಿಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸೆಬಾಸ್ಟಿಯನ್, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಬಂಗೇರ, ಪ್ರಮುಖರಾದ ಫ್ರಾನ್ಸಿಸ್, ಅಲೆಕ್ಸ್ ಒಜೆ, ವಿನ್ಸೆಂಟ್ ವೈಪಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.