
ಉಜಿರೆ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಸಂಘ ಉಜಿರೆ ವಲಯ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ನಾಳೆ ಅ15 ಶನಿವಾರ ಮಧ್ಯಾಹ್ನ 2.30ರಿಂದ ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಲಿದೆ.
ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಪಿ.ಎಚ್. ಪ್ರಕಾಶ್ ಶೆಟ್ಟಿ ನೊಚ್ಚ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಚಿತ್ರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುಣೆಯ ಉದ್ಯಮಿ ದಿನೇಶ್ ಶೆಟ್ಟಿ, ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ರಾಜು ಶೆಟ್ಟಿ ಬೆಂಗೆತ್ಯಾರು, ಉಮೇಶ್ ಶೆಟ್ಟಿ ಉಜಿರೆ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ವಸುಧಾ ಪಿ. ಶೆಟ್ಟಿ, ಬಂಟರ ಸಂಘ ಉಜಿರೆ ವಲಯದ ಅಧ್ಯಕ್ಷ ರವೀಂದ್ರ ಶೆಟ್ಟಿ ಸುರಭಿ ಹಾಗೂ ಯುವ ಬಂಟರ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ತಿಳಿಸಿದ್ದಾರೆ.