
ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಜಿರಡ್ಕದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಹರೀಶ್ ಪೂಂಜಾ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ಸಮೃದ್ಧಿ ಲಭಿಸಲಿ. ಅಲ್ಲದೆ, ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮೂರನೇ ಅವಧಿಗೆ ಗೆದ್ದು, ಶಾಸಕ ಸ್ಥಾನದಿಂದ ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಕಾರ್ಯಕರ್ತರು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕಲ್ಮಂಜ 89ನೇ ವಾರ್ಡ್ ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಅನಿಲ್ ಕುಮಾರ್, ಬೂತ್ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಂತಪ್ಪ ಎಂ., ಸಂದೀಪ್ ಎಸ್., ಪುರಕ್ಷಿತ್, ಭರತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.