ಶಾಸಕ ಹರೀಶ್ ಪೂಂಜ ಹುಟ್ಟುಹಬ್ಬದ ಪ್ರಯುಕ್ತ ಪೂಜೆ; ಕಮಲ ಅವರಿಗೆ ಮನೆ ನಿರ್ಮಾಣದ ಸಂಕಲ್ಪ

 

 

ಬೆಳ್ತಂಗಡಿ: ಗುರುವಾಯನಕೆರೆಯ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಪ್ರಯುಕ್ತ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ, ಶಾಸಕರ ಸಹಕಾರದೊಂದಿಗೆ ಹಾಗೂ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ಮತ್ತು ದಾನಿಗಳ ನೆರವಿನಿಂದ ಕುವೆಟ್ಟು ಗ್ರಾಮದ ಬರಾಯ ನಿವಾಸಿ ಕಮಲ ಅವರಿಗೆ ಮನೆ ನಿರ್ಮಿಸಿಕೊಡುವ ಸಂಕಲ್ಪದೊಂದಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ಅಧ್ಯಕ್ಷ ಪ್ರದೀಪ್ ಶೆಟ್ಟಿ ಶಕ್ತಿನಗರ, ದೇವಿಪ್ರಸಾದ್ ಆಚಾರ್ಯ ಶಕ್ತಿನಗರ, ವಿತೇಶ್ ಪಾಡ್ಯರ್, ಪ್ರದೀಪ್ ಶೆಟ್ಟಿ ನವಶಕ್ತಿ, ನಿಮಿತ್ ಪೂಜಾರಿ ಪಾಡ್ಯರ್, ಪವನ್ ಬಂಗೇರ ಬರಾಯ, ರಮೇಶ್ ಬರಾಯ ಸೇರಿದಂತೆ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ತಂಡದ ಸದಸ್ಯರು ಉಪಸ್ಥಿತರಿದ್ದರು.

error: Content is protected !!