
ಧರ್ಮಸ್ಥಳ: ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿ ಹಾಗೂ ಹಿಂದೂ ಸೇವಾ ಸಮಿತಿ, ಪುದುವೆಟ್ಟು ಇವರ ಸಹಯೋಗದಲ್ಲಿ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪ್ರಮುಖರು ಹಾಗೂ ವ್ರತಧಾರಿಗಳು ಉಪಸ್ಥಿತರಿದ್ದರು.