
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ರಿಕ್ಷಾ ಚಾಲಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಕೆಲವು ತಿಂಗಳಿಂದ ಆರೋಪಿ ಜಮಾಲುದ್ದೀನ್ ರಿಕ್ಷಾದಲ್ಲಿ ಶಾಲೆಗೆ ಸಂಚರಿಸುತ್ತಿದ್ದಳು. ಈ ವೇಳೆ ಅನುಚಿತವಾಗಿ ವರ್ತಿಸಿ, ಆಕೆ ವಿರೋಧಿಸಿದಾಗ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಆಗಸ್ಟ್ 13ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಯು ಮನೆಗೆ ಬಂದು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಗಸ್ಟ್ 15ರಂದು ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಕ್ಸೋ ಕಾಯ್ದೆ–2012ರ ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.