
ಬೆಳ್ತಂಗಡಿ: ತಾಲೂಕು ಬಂಟರ ಮಹಿಳಾ ವಿಭಾಗದ ವತಿಯಿಂದ ಗುರುವಾಯನಕೆರೆ ಬಂಟರ ಭವನದಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಯೋಜಿಸಲಾದ ವರಮಹಾಲಕ್ಷ್ಮೀ ವ್ರತಾಚರಣೆ ಪೂಜೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಹಿಳಾ ವಿಭಾಗದ ಪದಾಧಿಕಾರಿಗಳು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.