ಉತ್ತಮ ಶಾಸಕ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಗೌರಾವಾಭಿನಂದನೆ

 

 

ಬೆಳ್ತಂಗಡಿ: ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಸಮಿತಿ, ಬಂದಾರು, ಮೊಗ್ರು ಹಾಗೂ ಕಣಿಯೂರು ಗ್ರಾಮಗಳ ವತಿಯಿಂದ ಗೌರಾವಾಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆಗಸ್ಟ್ 23ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಪದ್ಮುಂಜ ಸಿ.ಎ. ಬ್ಯಾಂಕ್ ರೈತ ಸಭಾಭವನದಲ್ಲಿ ಈ ಗೌರಾವಾಭಿನಂದನಾ ಸಮಾರಂಭ ನಡೆಯಲಿದೆ.

ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಜನಪರ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವೈಖರಿಯನ್ನು ಗುರುತಿಸಿ ಹರೀಶ್ ಪೂಂಜ ಅವರಿಗೆ ಉತ್ತಮ ಶಾಸಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬಂದಾರು, ಮೊಗ್ರು ಹಾಗೂ ಕಣಿಯೂರು ಗ್ರಾಮಗಳ ಜನತೆ ಹಾಗೂ ಅಭಿಮಾನಿಗಳ ಸಹಭಾಗಿತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರನ್ನು ಗೌರವಿಸುವುದರ ಜೊತೆಗೆ, ಅವರ ಜನಪರ ಸೇವೆಯನ್ನು ಅಭಿನಂದಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಅಭಿನಂದನಾ ಸಮಿತಿ ಮನವಿ ಮಾಡಿದೆ.

error: Content is protected !!