ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದ ಶಾಸಕ ಹರೀಶ್ ಪೂಂಜ, ಕ್ಷೇತ್ರದ ವತಿಯಿಂದ ಗೌರವ:

 

 

ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ  ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಅವರು ಕುಟುಂಬ ಸಹಿತ  ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

 

ಇದೇ ಸಂದರ್ಭದಲ್ಲಿ ಕಟೀಲು ಕ್ಷೇತ್ರದ ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸ್ಮರಣಾರ್ಥ ಆಯೋಜಿಸಲಾಗಿದ್ದ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಕ್ಷೇತ್ರದ ವತಿಯಿಂದ ಶಾಸಕರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್,ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರು ಹಾಗೂ ಭಕ್ತರು ಉಪಸ್ಥಿತರಿದ್ದರು.

error: Content is protected !!