
ಬೆಳ್ತಂಗಡಿ: ನೀಟ್ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಾ, ರಾಜ್ಯದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದತ್ತ ಕಳುಹಿಸುತ್ತಿರುವ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.
ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಂತ್ ಕುಮಾರ್ ಜೈನ್ ಅವರು ಸಲ್ಲಿಸುತ್ತಿರುವ ಸೇವೆ ಹಾಗೂ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಯಿತು. ಇತ್ತೀಚೆಗೆ ‘ಗ್ಯಾರಂಟಿ ನ್ಯೂಸ್ ಕನ್ನಡ’ ವತಿಯಿಂದ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದರ ಜೊತೆಗೆ, ಅವರ ಉನ್ನತ ಶಿಕ್ಷಣ ಮತ್ತು ಭವಿಷ್ಯದ ಗುರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಕಾರ್ಯವನ್ನು ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಭಿನಂದಿಸಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಸಿ. ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚರ್ ಹಾಗೂ ಬದ್ರುದ್ದಿನ್ ಕಾಜೂರು, ಕಾರ್ಯದರ್ಶಿ ಅಶ್ರಫ್ ಲಾಯಿಲ ಮತ್ತು ಚಾರ್ಮಾಡಿ ಪಂಚಾಯತ್ ಮಾಜಿ ಸದಸ್ಯ ಫ್ರಾನ್ಸಿಸ್ ಉಪಸ್ಥಿತರಿದ್ದರು.