
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಪಣಕಜೆ ಸಮೀಪ ಟೆಂಪೋದ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಿನ್ಸ್ ಶಿಬಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿನ್ಸ್ ಶಿಬಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಯೂತ್ ಕಾಂಗ್ರೆಸ್‌ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ರಿನ್ಸ್ ಅವರ ಕೈ ಹಿಡಿದುಕೊಂಡು ನಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.