
ಬೆಳ್ತಂಗಡಿ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ದಿಡುಪೆಯ 40ನೇ ವರ್ಷದ ಶ್ರೀ ವಿದ್ಯಾಗಣಪತಿ ಪೂಜೋತ್ಸವ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಸೆಪ್ಟೆಂಬರ್ 1, 2026ರಂದು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಶ್ರೀ ವಿದ್ಯಾಗಣಪತಿ ಪೂಜೋತ್ಸವದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ವೈವಿಧ್ಯಮಯ ನೃತ್ಯ ಕಾರ್ಯಕ್ರಮಗಳು, ಭರತನಾಟ್ಯ, ಮಿಮಿಕ್ರಿ ಹಾಗೂ ಹಾಸ್ಯ ಕಾರ್ಯಕ್ರಮಗಳು, ವಿವಿಧ ಕ್ರೀಡೆ ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶ್ರೀ ಚಿಂತಾಮಣಿ ಡ್ಯಾನ್ಸ್ ಗ್ರೂಪ್, ಕಡೆಶಿವಾಲಯ–ಕಲ್ಲಡ್ಕ ಇವರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪಟ್ಟಾಭಿರಾಮ, ಸುಳ್ಯ ಇವರಿಂದ ಮಿಮಿಕ್ರಿ ಮತ್ತು ಹಾಸ್ಯ ಕಾರ್ಯಕ್ರಮ ನಡೆಯಲಿದೆ.
ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಪೂವನಿ ಗೌಡ ನೆಕ್ಕಿಲು, ಮಲವಂತಿಗೆ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಡಿ. ದಿನೇಶ್ ಗೌಡ ಕಜಕ್ಕೆ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಹಾಗೂ ಮಿತ್ತಬಾಗಿಲು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಚಂದ್ರಶೇಖರ ಗೌಡ ತಂಗಿತ್ತಿಪಾಲು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ತೀಕ್ಷಿತ್ ಕೆ. ಕಲ್ಬೆಟ್ಟು, ಗೌರವಾಧ್ಯಕ್ಷರಾದ ಕರಿಯ ಗೌಡ, ಕಾರ್ಯದರ್ಶಿಗಳಾದ ಜಯಂತ್ ಹೆಗ್ಡೆ ಹಾಗೂ ರಾಜೇಶ್ ಎಂ., ರಮೇಶ್ ವಿದ್ಯಾನಗರ, ಶ್ರೀಮತಿ ಮೋಹಿನಿ ಮಂಟಮೆ, ಉಪಾಧ್ಯಕ್ಷರಾದ ಯೋಗೀಶ್ ಗೌಡ, ಸಂದೇಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ನಿಶಾಂಕ್ ಗೌಡ ಪಾನಿಕ್ಕಲ್ ಸೇರಿದಂತೆ ಸಮಿತಿಯ ಹಲವು ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿದ್ದರು.