ಸೆಪ್ಟೆಂಬರ್ 15ರಂದು ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ.ಡಿ.ಪಿ. ಸಭೆ ಸಾರ್ವಜನಿಕರು ಅಭಿವೃದ್ಧಿ ಕಾಮಗಾರಿಗಳ ವಿಳಂಬದ ಕುರಿತು ಮಾಹಿತಿ ನೀಡಲು ಮನವಿ – ಸಂತೋಷ್ ಕುಮಾರ್ ಲಾಯಿಲ

 

 

 

 

ಮಂಗಳೂರು: 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಸೆಪ್ಟೆಂಬರ್ 15, 2026ರ ಮಂಗಳವಾರ ಪೂರ್ವಾಹ್ನ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಕಾಮಗಾರಿಗಳು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಾಗುವುದು.

ಈ ಹಿನ್ನೆಲೆಯಲ್ಲಿ, ಸರ್ಕಾರಿ ಕಾಮಗಾರಿಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಉಂಟಾಗಿರುವ ವಿಳಂಬ, ಲೋಪದೋಷಗಳು ಅಥವಾ ಇತರ ಸಮಸ್ಯೆಗಳ ಕುರಿತು ಸಾರ್ವಜನಿಕರು ತಮ್ಮಲ್ಲಿರುವ ಮಾಹಿತಿಯನ್ನು ಜಿಲ್ಲಾ ಕೆ.ಡಿ.ಪಿ. ಸದಸ್ಯರ ಕಚೇರಿಗೆ ನೀಡುವಂತೆ ಸಂತೋಷ್ ಕುಮಾರ್ ಲಾಯಿಲ ಅವರು ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದ ಲಭ್ಯವಾಗುವ ಮಾಹಿತಿಗಳನ್ನು ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

error: Content is protected !!