
ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 9ರಂದು ಸಂಜೆ ನಡೆದಿದೆ.
ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಎಂದು ಗುರುತಿಸಲಾಗಿದೆ. ಇವರು ನಡ ಸರ್ಕಾರಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಅನಾರೋಗ್ಯದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದ್ದು, ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.