
ಉಜಿರೆ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ (ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಹಾಗೂ ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ ಇವರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾದ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆ. 10ರಂದು ಉಜಿರೆಯ ಸಂಜೀವಿನಿ ಕಟ್ಟಡದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಘುರಾಮ ಶೆಟ್ಟಿ ‘ಸಾಧನಾ’ ಮಾತನಾಡಿ, “ಟೈಲರಿಂಗ್ ತರಬೇತಿಯು ಕೇವಲ ಒಂದು ಕಲೆ ಮಾತ್ರವಲ್ಲ; ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಸಬಲೀಕರಣಕ್ಕೆ ಉತ್ತಮ ಅವಕಾಶವಾಗಿದೆ. ಈ ತರಬೇತಿಯ ಮೂಲಕ ಹೊಸ ಕೌಶಲ್ಯಗಳನ್ನು ಕಲಿತು ಮಹಿಳೆಯರು ಸ್ವಾವಲಂಬಿಗಳಾಗಬೇಕು” ಎಂದು ಶುಭ ಹಾರೈಸಿದರು.
ಸೇವಾಭಾರತಿ ಅಧ್ಯಕ್ಷರು ಹಾಗೂ ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮಾತನಾಡಿ, “ಯಶಸ್ಸಿಗೆ ದೊಡ್ಡ ಅವಕಾಶಗಳಿಗಿಂತಲೂ ಕಲಿಯುವ ಮನಸ್ಸು ಮತ್ತು ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಮುಖ್ಯ. ಆದ್ದರಿಂದ ಈ ತರಬೇತಿಯನ್ನು ಉತ್ತಮ ಅವಕಾಶವಾಗಿ ಸ್ವೀಕರಿಸಿ, ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರಕಾಶ್ ಶೆಟ್ಟಿ ಮಾತನಾಡಿ, “ಮಹಿಳೆಯರು ಸ್ವಾವಲಂಬಿಗಳಾಗಲು ಹಾಗೂ ಉದ್ಯಮಶೀಲರಾಗಲು ಗ್ರಾಮ ಪಂಚಾಯತ್ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಮುಂದೆಯೂ ಮಹಿಳೆಯರ ಅಭಿವೃದ್ಧಿಗೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ” ಎಂದು ತಿಳಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ (ರಿ.) ಅಧ್ಯಕ್ಷೆ ಶ್ರೀಮತಿ ವಿನುತಾ ರಜತ್ ಗೌಡ, ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಪುಷ್ಪವತಿ, ಬೆಳ್ತಂಗಡಿ ತಾಲೂಕು ಕೃಷಿಯೇತರ ವ್ಯವಸ್ಥಾಪಕ ಶ್ರೀ ನಿತೀಶ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಮಮತಾ ಬಿ. ಹಾಗೂ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಲಲಿತಾ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 66 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಶ್ರೀಮತಿ ಶಾಶ್ವಿತ ಸ್ವಾಗತಿಸಿದರು. ಶ್ರೀಮತಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಭಾಗೀರಥಿ ವಂದಿಸಿದರು.