ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ ಹೊಡೆದು ವ್ಯಕ್ತಿ ಸಾವು ಮರದ  ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಕಾರ್ಮಿಕ

 

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಮೃತರನ್ನು ಬಂದಾರು ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ.

ಪದ್ಮುಂಜದಲ್ಲಿರುವ ಮರದ ಮಿಲ್‌ನಲ್ಲಿ ಜಯಪ್ರಕಾಶ್ ಅವರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಜಯಪ್ರಕಾಶ್ ಅವರ ಸ್ಥಿತಿ ಗಂಭೀರವಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ವಿದ್ಯುತ್ ಆಘಾತದಿಂದ ಸಂಭವಿಸಿದ ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮತ್ತು ದುಃಖ ಆವರಿಸಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!