
ಬೆಳ್ತಂಗಡಿ: ಧರ್ಮಸ್ಥಳದಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಸೆ.14ರ ರಾತ್ರಿ ಧರ್ಮಸ್ಥಳದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ನಾಲ್ವರು ಕುಟುಂಬ ಸದಸ್ಯರು ಟೊಯೋಟಾ ಇಟಿಯಾಸ್ ಕಾರಿನಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದರು. ರಾತ್ರಿ ಸುಮಾರು 9ರ ವೇಳೆಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿಯ ಸರ್ವಿಸ್ ಸ್ಟೇಷನ್ ಪಕ್ಕದ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರು ಚಾಲಕ ಶಶಿಕುಮಾರ್ ಸೇರಿದಂತೆ ಮೂವರಿಗೆ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ತಿಳಿದು ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.