ಇಂಜಿನಿಯರ್ ದಿನಾಚರಣೆ ಪ್ರಯುಕ್ತ ಸಿವಿಲ್ ಇಂಜಿನಿಯರ್ ಶೈಲೇಶ್ ಆರ್.ಜೆ. ಅವರಿಗೆ ಸನ್ಮಾನ

 

 

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿಯ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ತುಳುಪರ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ತುಳುನಾಡು ಒಕ್ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿರುವ ಸಿವಿಲ್ ಇಂಜಿನಿಯರ್ ಶೈಲೇಶ್ ಆರ್.ಜೆ. ಅವರನ್ನು ಸನ್ಮಾನಿಸಲಾಯಿತು.

ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಶೈಲೇಶ್ ಆರ್.ಜೆ. ಅವರ ಸೇವೆಯನ್ನು ಗುರುತಿಸಿ ಈ ಸನ್ಮಾನವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಜಿಲ್ಲಾ ಸಮಿತಿಯ ಸದಸ್ಯರಾದ ಶಾಂಭವಿ ಪಿ. ಬಂಗೇರ, ವಲಯ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಗಜಾನನ ಟೈಲರ್  ಉಪಸ್ಥಿತರಿದ್ದರು.

ತಾಲೂಕು ಸಮಿತಿಯ ಉಪಾಧ್ಯಕ್ಷರಾದ ವಸಂತ ಸ್ವಾತಿ  ಸ್ವಾಗತಿಸಿದರು. ಶಿವರಾಮ ಹೆಗ್ಡೆ ವಂದಿಸಿದರು.

error: Content is protected !!