ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ:

 

 

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅನಂತೋಡಿಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಲಭಿಸಲಿ ಹಾಗೂ ದೇಶಕ್ಕೆ ಉತ್ತಮ ಆಡಳಿತ ನೀಡುವ ಶಕ್ತಿ ದೊರೆಯಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು. ಜೊತೆಗೆ ವಿಕಸಿತ ಭಾರತದ ಸಂಕಲ್ಪವನ್ನು ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಉಪಾಧ್ಯಕ್ಷ ವೆಂಕಟೇಶ್ ಬೆಳಾಲು, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಜಿಲ್ಲಾ ಮನ್ ಕಿ ಬಾತ್ ಸಂಯೋಜಕ ಸೀತಾರಾಮ್ ಬೆಳಾಲ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!