
ಬೆಳ್ತಂಗಡಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಗರ್ಡಾಡಿಯ ಶ್ರೀ ನಂದಿಕೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶದ ಅಭಿವೃದ್ಧಿ, ಶಾಂತಿ, ಸಮೃದ್ಧಿ ಹಾಗೂ ಜನಕಲ್ಯಾಣಕ್ಕಾಗಿ ಶ್ರೀ ನಂದಿಕೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಶಾಸಕ ಹರೀಶ್ ಪೂಂಜಾ ಅವರು, ‘ವಿಕಸಿತ ಭಾರತ’ದ ಸಂಕಲ್ಪವನ್ನು ಕೈಗೊಂಡರು.
ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಬೇಕು. ದೇಶದ ಸಮಗ್ರ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು.
ಶಕ್ತಿ ಕೇಂದ್ರದ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.