ಮೋದಿ ಜನ್ಮದಿನದ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಪೂಜೆ:ವಿಕಸಿತ ಭಾರತದ ಸಂಕಲ್ಪ:

 

 

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ಧರ್ಮಸ್ಥಳ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ಹಾಗೂ ಪ್ರಗತಿಗಾಗಿ ‘ವಿಕಸಿತ ಭಾರತ’ ಸಂಕಲ್ಪ ಕೈಗೊಳ್ಳಲಾಯಿತು. ದೇಶವು ಅಭಿವೃದ್ಧಿಯ ಪಥದಲ್ಲಿ ಮತ್ತಷ್ಟು ಮುನ್ನಡೆಯಲಿ ಹಾಗೂ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಕಾರ್ಯಕರ್ತರು ಮಾಡಿದರು.

ಈ ವೇಳೆ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರೀತಂ ಸೇರಿದಂತೆ ಧರ್ಮಸ್ಥಳ ಶಕ್ತಿ ಕೇಂದ್ರದ ಪ್ರಮುಖರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!