ಮೂಡಬಿದ್ರೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವರಿಗೆ ಗಾಯ

 

 

 

ಕಾರ್ಕಳ: ಕಾರ್ಕಳ–ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಕಾರ್ಕಳದಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಸಾಣೂರು ಜಂಕ್ಷನ್‌ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ರಮಾನಾಥ ರೈ ಅವರನ್ನು ಸ್ಥಳೀಯರು ಹರಸಾಹಸಪಟ್ಟು ಹೊರತೆಗೆದಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಹೆಚ್ಚಿನ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಅಪಘಾತದಲ್ಲಿ ಬಸ್ ಹಾಗೂ ಕಾರಿನಲ್ಲಿದ್ದ ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ಅಪಘಾತದ ಹಿನ್ನೆಲೆಯಲ್ಲಿ ಸಾಣೂರು ಜಂಕ್ಷನ್‌ ಬಳಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಹಾಗೂ ಅಪಘಾತದ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.

error: Content is protected !!