
ಧರ್ಮಸ್ಥಳ: ಕುಮಾರಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಪ್ಪಿಸಿರುವ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತಮನಸ್ಸಿನಿಂದ ಸ್ವಾಗತಿಸುವುದಾಗಿ ದೇವಾಲಯದ ವ್ಯವಸ್ಥಾಪಕ ಶ್ರೀ ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ
ಸುಪ್ರೀಂ ಕೋರ್ಟ್ ಆದೇಶಿಸಿರುವ ಮರುತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕು. ತನಿಖೆಯ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಬೇಕು ಎಂಬ ಆಶಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ವ್ಯಕ್ತಪಡಿಸಿದೆ.
ಮರುತನಿಖೆಯ ಹಿನ್ನೆಲೆಯಲ್ಲಿ ಪ್ರಕರಣದ ಸತ್ಯಾಸತ್ಯತೆಗಳು ಬೆಳಕಿಗೆ ಬಂದು ಸೌಜನ್ಯಾಳಿಗೆ ನ್ಯಾಯ ದೊರೆಯಲಿ ಎಂಬುದು ಶ್ರೀ ಕ್ಷೇತ್ರದ ನಿಲುವಾಗಿದೆ.ಎಂದು ತಿಳಿಸಿದ್ದಾರೆ.