ಕರ್ತವ್ಯ ಲೋಪ ಶಿರ್ಲಾಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಶೀಲಾ ಅಮಾನತು:

 

 

 

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಆಯೋಜಿಸಿದ್ದ ವಿಶೇಷ ಗ್ರಾಮಸಭೆಗೆ ಗೈರುಹಾಜರಾದ ಆರೋಪದ ಹಿನ್ನೆಲೆಯಲ್ಲಿ ಶಿರ್ಲಾಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶೀಲಾ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಿಸ್ತು ಪ್ರಾಧಿಕಾರ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್ 25ರಂದು ವಿಶೇಷ ಗ್ರಾಮಸಭೆ ನಡೆಸಲು ತಾಲೂಕು ಪಂಚಾಯತ್ ದಿನಾಂಕ  ನಿಗದಿಪಡಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಸಭೆಯನ್ನು ಸೆಪ್ಟೆಂಬರ್ 21ರಂದು ನಿಗದಿಪಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಸಭೆಗೆ ಗ್ರಾಮಸ್ಥರು ಆಗಮಿಸಿದ್ದರೂ ಅಭಿವೃದ್ಧಿ ಅಧಿಕಾರಿ ಗೈರುಹಾಜರಾಗಿದ್ದರಿಂದ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅದಲ್ಲದೇ ಹಲವು ಬಾರಿ ಕರ್ತವ್ಯಲೋಪ ಎಸಗಿರುವುದು ಕಛೇರಿಗೆ ತಡವಾಗಿ ಬರುವುದು ಈ ಎಲ್ಲ ಕಾರಣಗಳ ಬಗ್ಗೆ
ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಿಶೀಲನೆ ನಡೆಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಸೆಪ್ಟೆಂಬರ್ 22ರಂದು ಶಿರ್ಲಾಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶೀಲಾ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿ ತಿಳಿಸಿದೆ.

error: Content is protected !!