ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

 

 

 

ಬೆಳ್ತಂಗಡಿ :ಬಿಜೆಪಿ ಪಕ್ಷದ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸೀತಾರಾಮ್ ಅವರು ಬೌದ್ಧಿಕ್ ನಡೆಸಿಕೊಟ್ಟರು. ಅರವಿಂದ್ ಲಾಯಿಲ ಅವರು ಬಿಜೆಪಿ ಗೀತೆ ಹಾಡಿ ಎಲ್ಲರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಪ್ರಭು, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್, ನಗರ ಶಕ್ತಿ ಕೇಂದ್ರದ ಪ್ರಕಾಶ್ ಆಚಾರ್ಯ ಹಾಗೂ ವಿಶ್ವನಾಥ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜನೆಯನ್ನು ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಅವರು ನಿರ್ವಹಿಸಿದರು.

error: Content is protected !!