ಸೌಜನ್ಯ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕೃತಜ್ಞತೆ; SIT ಬಗ್ಗೆ ಕುಸುಮಾವತಿ ಅಸಮಾಧಾನ

 

 

ಬೆಳ್ತಂಗಡಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯಕ್ಕೆ ಸೌಜನ್ಯಳ ತಾಯಿ ಕುಸುಮಾವತಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನವಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕುಸುಮಾವತಿ, “ನನ್ನ ಮಗಳು ಧರ್ಮಸ್ಥಳ ಸೌಜನ್ಯಳಿಗಾದ ದುರಂತದ ಮರುತನಿಖೆಗೆ ಆದೇಶಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ನಾವು ಎಂದಿಗೂ ಆಭಾರಿಯಾಗಿರುತ್ತೇವೆ” ಎಂದು ಹೇಳಿದ್ದಾರೆ.

“ಮರುತನಿಖೆಗಾಗಿ ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ದಳದ ಬಗ್ಗೆ ನಮಗೆ ಅಸಮಾಧಾನವಿದೆ” ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ SIT ಕುರಿತು ಸೌಜನ್ಯ ಕುಟುಂಬದ ಪರವಾಗಿ ಹೊರಬಂದಿರುವ ಮೊದಲ ಅಧಿಕೃತ ಹೇಳಿಕೆ ಇದಾಗಿದೆ ಎಂದು ತಿಳಿದುಬಂದಿದೆ.

ಆದರೆ, ತನಿಖಾ ತಂಡದ ಕುರಿತು ತಮಗೆ ಅಸಮಾಧಾನವಿರುವುದಕ್ಕೆ ಕಾರಣವೇನು ಎಂಬುದನ್ನು ಕುಸುಮಾವತಿ ತಮ್ಮ ಪ್ರಕಟಣೆಯಲ್ಲಿ ವಿವರಿಸಿಲ್ಲ. ಹೀಗಾಗಿ SIT ಕುರಿತು ಕುಟುಂಬದ ನಿರ್ದಿಷ್ಟ ಆಕ್ಷೇಪಣೆಗಳು ಏನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

error: Content is protected !!