
ಬೆಳ್ತಂಗಡಿ, : ತಾಲೂಕು ಭಂಡಾರಿ ಸಮಾಜ ಸಂಘ ಹಾಗೂ ಭಂಡಾರಿ ಯುವವೇದಿಕೆಯ ವತಿಯಿಂದ ಇತ್ತೀಚೆಗೆ ‘ಉತ್ತಮ ಶಾಸಕ’ ಪುರಸ್ಕಾರ ಪಡೆದ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜಾ ಅವರನ್ನು ಸೆ. 28ರಂದು ಭೇಟಿಯಾಗಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಕ್ಟೋಬರ್ 20ರಂದು ಉಜಿರೆಯಲ್ಲಿ ನಡೆಯಲಿರುವ ಭಂಡಾರಿ ಸಮಾಜದ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಶಾಸಕರಿಗೆ ನೀಡಿ, ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಶ್ರೀ ಪೂವಪ್ಪ ಭಂಡಾರಿ ಮದ್ದಡ್ಕ, ಭಂಡಾರಿ ಯುವವೇದಿಕೆಯ ಅಧ್ಯಕ್ಷ ಶ್ರೀ ಪ್ರಶಾಂತ್ ಭಂಡಾರಿ ಅಂಡಿಂಜೆ, ಸಮಾಜದ ಹಿರಿಯರಾದ ಏ. ಪೂವಪ್ಪ ಭಂಡಾರಿ ಪಣೆಜಾಲು, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಂಡಾರಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.