ಸಂಕಷ್ಟ ಚತುರ್ಥಿಯಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

 

 

ಬೆಳ್ತಂಗಡಿ: ಬಯಲು ಆಲಯವೆಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಸೆ. 29ರಂದು ಭೇಟಿ ನೀಡಿ ಶ್ರೀ ಮಹಾಗಣಪತಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಗಳ ನಿಮಿತ್ತ ತಾಲೂಕಿಗೆ ಆಗಮಿಸಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಕಷ್ಟ ಚತುರ್ಥಿಯ ಅಂಗವಾಗಿ ಸೌತಡ್ಕ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!