
ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉಂಟಾದ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ಬೆಳೆಗಳ ನಷ್ಟದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಮೂರು ತಾಲೂಕುಗಳನ್ನು ರಾಜ್ಯ ಸರ್ಕಾರ ‘ಮಧ್ಯಮ ಪ್ರಮಾಣದ ಬರಪೀಡಿತ ತಾಲೂಕುಗಳು’ ಎಂದು ಘೋಷಿಸಿದೆ.
ರಾಜ್ಯ ಸರ್ಕಾರದ ನೂತನ ಆದೇಶದಂತೆ ಬೆಳ್ತಂಗಡಿ, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿವೆ.
ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ವಿವಿಧ ಭಾಗಗಳಲ್ಲಿ ಉಂಟಾಗಿರುವ ಮಳೆ ಕೊರತೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಅಡಿಕೆ, ತೆಂಗು, ರಬ್ಬರ್ ಮತ್ತು ಭತ್ತದ ಬೆಳೆಗಳಿಗೆ ಉಂಟಾಗಿರುವ ಹಾನಿಯ ಕುರಿತು ಸರ್ಕಾರದ ಗಮನ ಸೆಳೆದಿದ್ದರು. ವೈಜ್ಞಾನಿಕ ಸಮೀಕ್ಷೆ ನಡೆಸಿ ಬೆಳ್ತಂಗಡಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಅವರು ಆಗ್ರಹಿಸಿದ್ದರು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನಡೆಸಿದ ಉಪಗ್ರಹ ಆಧಾರಿತ Trigger-1 ಮತ್ತು Trigger-2 ಸಮೀಕ್ಷೆ ಹಾಗೂ ತಾಲೂಕು ಮಟ್ಟದಲ್ಲಿ ನಡೆದ Ground Truthing ಸಮೀಕ್ಷೆಯ ಆಧಾರದ ಮೇಲೆ ಸರ್ಕಾರ ಬರಪೀಡಿತ ತಾಲೂಕುಗಳನ್ನು ಗುರುತಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಕಾರ್ಯದರ್ಶಿಗಳು ಅ.1ರಂದು RD 586 TNR 2026 Part 1 ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಹೆಚ್ಚುವರಿಯಾಗಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾದ 40 ತಾಲೂಕುಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕುಗಳು ಸೇರಿವೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದ್ದು, ಆರು ತಿಂಗಳ ಅವಧಿಗೆ ಅನ್ವಯವಾಗಲಿದೆ.
ಬರಪೀಡಿತ ತಾಲೂಕುಗಳಲ್ಲಿ ಬೆಳೆ ನಷ್ಟದ ಕುರಿತು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೆ, SDRF ಮಾನದಂಡಗಳನ್ವಯ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕುಡಿಯುವ ನೀರಿನ ಕೊರತೆ ಎದುರಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು, ಜಾನುವಾರುಗಳಿಗೆ ಮೇವಿನ ಲಭ್ಯತೆ ಖಚಿತಪಡಿಸುವುದು ಸೇರಿದಂತೆ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಬೇಕಿದೆ.
ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವುದರಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದ್ದು, ಜಂಟಿ ಬೆಳೆ ನಷ್ಟ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಿ ಅರ್ಹ ರೈತರಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂಬುದು ಕೃಷಿಕರ ಆಶಯವಾಸೂಚನೆ