ಸಪ್ತತಿ ಸಂಭ್ರಮದಲ್ಲಿರುವ ವಿಶ್ವ ನಾಯಕನಿಗೆ ಶುಭ ಕೋರಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:ಸಪ್ತತಿ ಸಂಭ್ರಮದಲ್ಲಿರುವ ವಿಶ್ವದ ಅಗ್ರಮಾನ್ಯ ನಾಯಕ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿಯವರಿಗೆ 70ನೇ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್  (ABVP)ಮೂಲಕ ಬೆಳೆದು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸೇರಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಗುಜರಾತ್ ನ ಲೋಕ ಸಂಘರ್ಷ ಸಮಿತಿಯ  ಪ್ರಧಾನ ಕಾರ್ಯದರ್ಶಿಗಳಾಗಿ ಗುಜರಾತ್  ಮುಖ್ಯಮಂತ್ರಿಗಳಾಗಿ ಹಲವು ವರುಷಗಳ ಅವಧಿಯಲ್ಲಿ  ಜನಪರ ಆಡಳಿತ ನಡೆಸಿ,2014 ರಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕ ಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಭಾರತದ ಪ್ರಧಾನಮಂತ್ರಿಗಳಾಗಿ ಆಯ್ಕೆಯಾಗಿ 5 ವರ್ಷಗಳ ಕಾಲ ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡಿ 2019 ಲೋಕ ಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ದಾಖಲೆ ಗೆಲುವು ಸಾಧಿಸಿ ಎರಡನೇ ಅವಧಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆಯಾಗಿ ವಿಶ್ವದ ಎಲ್ಲಾ ದೇಶಗಳೊಂದಿಗೆ ಉತ್ತಮ ಭಾಂದವ್ಯ ವೃಧಿಸುವುದರ ಮೂಲಕ ವಿಶ್ವದ ಅಗ್ರಮಾನ್ಯ ನಾಯಕರೆನಿಸಿಕೊಂಡು ಇದೀಗ ಸೆಪ್ಟೆಂಬರ್ 17 ರಂದು 70 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಯವರಿಗೆ ಶುಭ ಕೋರಿದ ಶಾಸಕರು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಆಶೀರ್ವಾದ ಸದಾ   ಪ್ರಧಾನಿಗಳ ಮೇಲಿರಲಿ ಎಂದು  ಪ್ರಾರ್ಥಿಸುತ್ತೇನೆ ಎಂದರು.

error: Content is protected !!