ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಧರ್ಮಸ್ಥಳ ಭೇಟಿ

ಬೆಳ್ತಂಗಡಿ:ರಾಜ್ಯ ಸಹಕಾರ ಸಚಿವ  ಎಸ್.ಟಿ. ಸೋಮಶೇಖರ ಅವರು ಶನಿವಾರ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ  ಭೇಟಿ ನೀಡಿದರು.
ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಕ್ಷೇತ್ರದ ಪರವಾಗಿ ಡಾ.ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ಈ ಸಂದರ್ಭ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್  ಉಪಸ್ಥಿತರಿದ್ದರು
ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರುಗಳು, ಸಹಕಾರ ಭಾರತಿಯ ಪದಾಧಿಕಾರಿಗಳು ಶಾಸಕ ಹರೀಶ್ ಪೂಂಜ ಹಾಗೂ  ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್  ನೇತೃತ್ವದಲ್ಲಿ
ಸಚಿವರನ್ನು  ಸನ್ನಿಧಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಚರ್ಚಿಸಿದರು.
error: Content is protected !!