ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ: ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದ ಅನಂತಕೃಷ್ಣ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅನಂತಕೃಷ್ಣ ಅವರ ನಿಧನದ ವಾರ್ತೆ ತಿಳಿದು ದುಖಃವಾಯಿತು.ಸರಳ ಸಜ್ಜನಿಕೆ, ಮೃದು ಭಾಷಿಯಾಗಿದ್ದ ಶ್ರೀಯುತರು ಕರ್ನಾಟಕ ಬ್ಯಾಂಕ್‍ನ್ನು ಯಶಸ್ವಿಯಾಗಿ ಮುನ್ನಡೆಸಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದರು. ಅವರ ಮತ್ತು ಧರ್ಮಸ್ಥಳ ಕ್ಷೇತ್ರದ ಬಾಂಧವ್ಯದಿಂದಾಗಿ ಅವರನ್ನು ಕಳೆದುಕೊಂಡು ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ.‌ಹೆಗ್ಗಡೆಯವರು ಸಂತಾಪ ಸೂಚಿಸಿದರು.

error: Content is protected !!