ಅ. 19ರಂದು ಮೀಡಿಯಾ ಕ್ಲಬ್ ಉದ್ಘಾಟನೆ: ಸತೀಶ್ ಪೆರ್ಲೆ


ಬೆಳ್ತಂಗಡಿ: ತಾಲೂಕಿನ ಮೀಡಿಯಾ ಕ್ಲಬ್ ನ್ನು ಅ. 19ರಂದು ಬೆಳ್ತಂಗಡಿ ವಿಧಾನ ಸಭಾ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಲಿದ್ದಾರೆ ಎಂದು ಮೀಡಿಯಾ ಕ್ಲಬ್ ಅಧ್ಯಕ್ಷ ಸತೀಶ್ ಪೆರ್ಲೆ ಹೇಳಿದರು. ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಈ ಕಾರ್ಯಕ್ರಮವನ್ನು ಆಯೋಜಿಸುವ ದೃಷ್ಟಿಯಿಂದ ಕ್ಲಬ್ ಲೋಗೋವನ್ನು ಅ. 09 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆಗೊಳಿಸಿ. ಇದೀಗ ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಡಿಯಾ ಕ್ಲಬ್ ಅಧ್ಯಕ್ಷ ಸತೀಶ್ ಪೆರ್ಲೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್, ಕೆ. ಪ್ರತಾಪ್ ಸಿಂಹ ನಾಯಕ್
ಮಾಜಿ ಶಾಸಕ ವಸಂತ ಬಂಗೇರ,
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿ ಕುಂಜ್ಙಿ ದ ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ , ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಉಜಿರೆ,ವೃತ್ತ ನಿರೀಕ್ಷಕ ಸಂದೇಶ್ ಪಿಜಿ, ನ್ಯಾಯವಾದಿ ಸುಬ್ರಮಣ್ಯ ಕುಮಾರ್ ಅಗರ್ತ, ಹಾಗೂ ಪ್ರಮೋದ್ ಆರ್ ನಾಯಕ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಉಮೇಶ್ ಕುಲಾಲ್, ಕೋಶಾಧಿಕಾರಿ ಶರತ್ ಎಂ ಗೌಡ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸದಸ್ಯರಾದ ನಿತಿನ್ ಗೌಡ, ಚೇತನ ಉಪಸ್ಥಿತರಿದ್ದರು.

error: Content is protected !!