ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಚಂಡಿಕಾ ಯಾಗ ನಡೆಯಿತು.
ಬೆಂಗಳೂರಿನ ವೇದಮೂರ್ತಿ ಲಕ್ಷ್ಮೀಪತಿ ಗೋಪಾಲಾಚಾರ್ಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಪೀತಾಂಬರ ಹೆರಾಜೆ, ಅಣ್ಣಿ ಪೂಜಾರಿ, ಸುಜಾತ ಅಣ್ಣಿ ಪೂಜಾರಿ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.