ನಮ್ಮ ಹೆಮ್ಮೆಯ ಖಾವಂದರು: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಚಯದ ವಿಡಿಯೋ ರಿಲೀಸ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ, ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿಮಾನಿ ಬಳಗದಿಂದ “ನಮ್ಮ ಹೆಮ್ಮೆಯ ಖಾವಂದರು” ವಿಡಿಯೋ ಬಿಡುಗಡೆ ಮಾಡಲಾಯಿತು.
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸರಳ‌ ಸಮಾರಂಭದಲ್ಲಿ ಧರ್ಮಾಧಿಕಾರಿ‌ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪರಿಚಯದ ವಿಡಿಯೋವನ್ನು ಹೇಮಾವತಿ ವೀ. ಹೆಗ್ಗಡೆ ಬಿಡುಗಡೆಗೊಳಿಸಿದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಇವರ ಸಹಕಾರದಲ್ಲಿ ಧರ್ಮಸ್ಥಳದ ಸಂದೀಪ್ ದೇವ್, ಚೇತನ್ ಹೆಗ್ಡೆ, ನಿತಿನ್ ಕುಮಾರ್ ಶೆಟ್ಟಿ, ಸುನಿಲ್ ಹೆಗ್ಡೆ, ಶ್ರುತಿ ಜೈನ್ ಇವರ ಪರಿಕಲ್ಪನೆಯಲ್ಲಿ ಮೂಡಿಬಂದಿದೆ. ಆರ್. ಜೆ. ಪ್ರಸನ್ನ ಇವರ ಹಿನ್ನಲೆ ಧ್ವನಿಯಿದ್ದು, ರಕ್ಷಿತ್ ರೈ ಅವರು ಸಂಕಲನ ಮಾಡಿದ್ದಾರೆ.

ವಿಡಿಯೋ ಬಿಡುಗಡೆ ಸಂದರ್ಭ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಶ್ರೀ ಧಾಮ‌ ಮಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಹಾವೇರಿ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಕೆ. ಚಿನ್ನಪ್ಪಗೌಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್,  ಸೋನಿಯಾ ವರ್ಮ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

error: Content is protected !!