ದೀಪಾವಳಿ ಬಳಿಕ ನವ ಭಾರತ ನಿರ್ಮಾಣ: ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ:‌ ಕೊರೋನಾ ಸಂದರ್ಭ ವಿಶ್ವದಲ್ಲಿ ಶಾಪಗ್ರಸ್ಥ ಪರಿಸ್ಥಿತಿ ಎದುರಾಗಿತ್ತು. ಕೊರೋನಾದಿಂದ ಸಾವುನೋವಿನ ವರದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿತ್ತು. ಆದರೆ ಭಾರತದ ಜನರಲ್ಲಿ ಉತ್ತಮ ರೋಗನಿರೋಧಕ ಶಕ್ತಿ ಇರುವುದರಿಂದ ಹೆಚ್ಚಿನ ಪರಿಣಾಮ ಬೀರಲಿಲ್ಲ. ಆದರೂ ಕೊರೋನಾದಿಂದ ಜನರು ಮಾನಸಿಕ ಹಾಗೂ ದೈಹಿಕವಾಗಿ ಎದುರಿಸುವ ಶಕ್ತಿ ಇದ್ದುದರಿಂದ ಹಾಗೂ ಸರಕಾರದ ಸಹಕಾರದಿಂದ ನಿಯಂತ್ರಣಕ್ಕೆ ಬರಲಿದೆ. ದೀಪಾವಳಿ ಬಳಿಕ ಸಮಸ್ಯೆಗಳು ದೂರವಾಗಿ ದೇಶದ ಜನಜೀವನ ಸಹಜ ಸ್ಥಿತಿಗೆ ಬಂದು ನವ ಭಾರತ ನಿರ್ಮಾಣವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ‌.‌ ವೀರೇಂದ್ರ ಹೆಗ್ಗಡೆಯವರು ನುಡಿದರು.
ಅವರು ತಮ್ಮ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಮಾತನಾಡಿದರು.
ಆಘಾತಗಳು ಆದಾಗ ಪರಿವರ್ತನೆ ಆಗುತ್ತದೆ. ಭಾರತದಲ್ಲೂ ಕೋವಿಡ್ ನಿಂದ ಕಷ್ಟ, ನಷ್ಟ, ಸಾವು, ನೋವು ಉಂಟಾಗಿದೆ. ಆದರೆ ದೇಶ ಒಗ್ಗಟ್ಟಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿ ಉತ್ತಮ ರೀತಿಯಲ್ಲಿ ನಡೆಯಲಿದೆ ಎಂದರು.
ಹೇಮಾವತಿ ವೀ. ಹೆಗ್ಗಡೆ, ಶ್ರೀ ಧಾಮ‌ ಮಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಹಾವೇರಿ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಕೆ. ಚಿನ್ನಪ್ಪಗೌಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: Content is protected !!