ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಛತ್ರದಲ್ಲಿ ಸ್ಥಳಾವಕಾಶ ಕೊರತೆ ಎದುರಾಗುತ್ತಿರುವುದರಿಂದ ಸ್ಥಳಾವಕಾಶದ ಕೊರತೆ ಎದುರಾಗುತ್ತಿದೆ. ಆದ್ದರಿಂದ ಈಗ ಇರುವ ಅನ್ನಪೂರ್ಣ ಅನ್ನಛತ್ರದ ಮೇಲ್ಭಾಗದಲ್ಲಿ ಅಷ್ಟೇ ದೊಡ್ಡದಾದ ಅನ್ನಛತ್ರ ನಿರ್ಮಾಣವಾಗಲಿದೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನುಡಿದರು.
ಅವರು ತಮ್ಮ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಮಾತನಾಡಿದರು.
ಶ್ರೀ ಮಂಜುನಾಥೇಶ್ವರ ವಿಶ್ವವಿದ್ಯಾಲಯ ರಾಜ್ಯದಲ್ಲೇ ಉತ್ತಮ ವಿ.ವಿ. ಎಂಬ ಖ್ಯಾತಿಗೆ ಪಾತ್ರವಾಗಿದೆ, ರಾಷ್ಟ್ರ ಮಟ್ಟದಲ್ಲಿ ಅತೀ ವೇಗವಾಗಿ ಬೆಳವಣಿಗೆ ಬಹೊಂದುತ್ತಿರುವ ವಿಶ್ವವಿದ್ಯಾಲಯವೂ ಆಗಿದೆ. ಶ್ರೀ ಕ್ಷೇತ್ರದಲ್ಲಿ ಭಕ್ತರ ಅನುಕೂಲಕ್ಕಾಗಿ ಕ್ಯೂ ಕಾಂಪ್ಲೆಕ್ಸ್, ಆನ್ ಲೈನ್ ಬುಕ್ಕಿಂಗ್, ಇ-ಕಾಣಿಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದರು.
ಹೇಮಾವತಿ ವೀ. ಹೆಗ್ಗಡೆ, ಶ್ರೀ ಧಾಮ ಮಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಹಾವೇರಿ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಕೆ. ಚಿನ್ನಪ್ಪಗೌಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.