ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಸಲುವಾಗಿ 21 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ 20 ಸಾವಿರ ಟ್ಯಾಬ್, ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ 10 ಸಾವಿರ ಲ್ಯಾಪ್‌ಟಾಪ್ ವಿತರಣೆಗೆ ಯೋಜನೆ ರೂಪಿಸಲಾಗಿದೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನುಡಿದರು.
ಅವರು ತಮ್ಮ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಮಾತನಾಡಿದರು.
ಹೇಮಾವತಿ ವೀ. ಹೆಗ್ಗಡೆ, ಶ್ರೀ ಧಾಮ ಮಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಹಾವೇರಿ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಕೆ. ಚಿನ್ನಪ್ಪಗೌಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.