ನಿರ್ಗತಿಕರಿಗೆ ವಾತ್ಸಲ್ಯ ಯೋಜನೆಯಡಿ ಸೌಕರ್ಯ :ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಅನಾಥರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ವಾತ್ಸಲ್ಯ ಯೋಜನೆ ರೂಪಿಸಲಾಗಿದೆ. ಸರ್ವೇ ನಡೆಸಿ ಅರ್ಹರನ್ನು ಗುರುತಿಸಿ, ಮನೆ ರಿಪೇರಿ, ಮಂಚ, ಹಾಸಿಗೆ, ಹೊದಿಕೆ, ಪಾತ್ರೆಗಳು ಹಾಗೂ ಜೀವನಾವಶ್ಯಕ ವಸ್ತುಗಳನ್ನು ಒದಗಿಸಲಾಗುವುದು ಎಂದು‌ ಧರ್ಮಾಧಿಕಾರಿ‌ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನುಡಿದರು.
ಅವರು ತಮ್ಮ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಮಾತನಾಡಿದರು.
ನಮ್ಮ ಊರು, ನಮ್ಮ ಕೆರೆ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿ ಮಾಡುವ ಕಾರ್ಯವೂ ನಡೆಯಲಿದೆ ಎಂದರು.
ಹೇಮಾವತಿ ವೀ. ಹೆಗ್ಗಡೆ, ಶ್ರೀ ಧಾಮ‌ ಮಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಹಾವೇರಿ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಕೆ. ಚಿನ್ನಪ್ಪಗೌಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: Content is protected !!