ಧರ್ಮಸ್ಥಳ: ಕೊರೋನಾ ಕಾರಣದಿಂದ ಜನತೆ ಗ್ರಾಮೀಣ ಭಾಗಕ್ಕೆ ಆಗಮಿಸಿದ್ದಾರೆ. ಕೃಷಿಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಭತ್ತ, ಜೋಳ, ಗೋಧಿ, ಹೆಸರು ಮೊದಲಾದ ಧಾನ್ಯಗಳನ್ನು ನಾಟಿ ಹಾಗೂ ಕಟಾವಿಗೆ ಸಹಾಯವಾಗಲು ಯಂತ್ರಶ್ರೀ ಯೋಜನೆ ರೂಪಿಸಲಾಗಿದೆ. ಈ ಯೋಜನೆಗಾಗಿ 15 ಕೋಟಿ ವೆಚ್ಚದಲ್ಲಿ ಯಂತ್ರೋಪಕರಣ ಖರೀದಿಸಲಾಗಿದೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನುಡಿದರು.
ಅವರು ತಮ್ಮ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಮಾತನಾಡಿದರು.
ರಾಜ್ಯದ 8 ಸಾವಿರ ಎಕರೆ ಭೂಮಿಯಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಈ ಯೋಜನೆ ಸಹಕಾರಿಯಾಗಲಿದೆ. ಸಿರಿ ಧಾನ್ಯಗಳನ್ನು ಸಂಗ್ರಹಿಸುವ ಪ್ರಕ್ರಿಯೆಗೂ ಸಹಾಯ ಮಾಡಲಾಗುವುದು. ಒಟ್ಟಿನಲ್ಲಿ ಕೃಷಿಯಿಂದ ಗೌರವಯುತ ಜೀವನ ನಡೆಸಲು ಬೇಕಾದ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಹೇಮಾವತಿ ವೀ. ಹೆಗ್ಗಡೆ, ಶ್ರೀ ಧಾಮ ಮಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಹಾವೇರಿ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಕೆ. ಚಿನ್ನಪ್ಪಗೌಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.