ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ…

ಬೆಳ್ತಂಗಡಿ : ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಶಿರ್ಲಾಲು ಇದರ ನಡಿಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶಾಖಾ ಕಟ್ಟಡದ ಉದ್ಘಾಟನೆಯು ಅ. 26 ರಂದು ಸುಲ್ಕೇರಿಮೊಗ್ರುವಿನಲ್ಲಿ ನಡೆಯಿತು.
ನೂತನ ಶಾಖಾ ಕಟ್ಟಡದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಇದರ ಅಧ್ಯಕ್ಷ, ಸಹಕಾರಿ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ನೆರವೇರಿಸಿದರು.
ಬ್ಯಾಂಕ್ ಕಛೇರಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಕೆ.ಹರೀಶ್ ಕುಮಾರ್ ಭದ್ರತಾ ಕೋಶದ ಉದ್ಘಾಟನೆ, ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಬಿ. ನಿರಂಜನ, ಮಂಗಳೂರು ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್, ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು, ಬೆಳ್ತಂಗಡಿ ಪಿ.ಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ, ಪ್ರಗತಿಪರ ಕೃಷಿಕ ಎಂ. ಗಂಗಾಧರ ಮಿತ್ತಮಾರು, ಅಳದಂಗಡಿ ತಾ. ಪಂ. ಸದಸ್ಯೆ ವಿನುಷಾ ಪ್ರಕಾಶ್, ಅಡಿಂಜೆ ತಾ.ಪಂ. ಸದಸ್ಯ ಸುಧೀರ್ ಆರ್ ಸುವರ್ಣ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುಕನ್ಯ ಭಟ್, ಉಪಸ್ಥಿತರಿದ್ದರು.

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಶಿರ್ಲಾಲು ಅಧ್ಯಕ್ಷ ನವೀನ್ ಕೆ. ಸಾಮಾನಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ನಿತ್ಯಾನಂದ ಶೆಟ್ಟಿ, ಉಪಾಧ್ಯಕ್ಷ ತಾರಾನಾಥ ಗೌಡ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

error: Content is protected !!