ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

ಬೆಳ್ತಂಗಡಿ: ಹಿರಿಯ ಕ್ರಿಕೇಟಿಗ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ‌ ಕಂಡು ಬಂದಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಫೋಟೋ ‌ಅಂತರ್ಜಾಲದಲ್ಲಿ ಹರಿದಾಡುತ್ತಿದೆ.
ಕಪಿಲ್ ಅವರು ಭಾರತಕ್ಕೆ ಕ್ರಿಕೆಟ್‌ ನಲ್ಲಿ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ಕಪ್ತಾನರಾಗಿದ್ದು, ಅ.23ರಂದು ಹೃದಯಾಘಾತಕ್ಕೆ ಒಳಗಾಗಿ ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿದ್ದರು.
ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು. ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದರು. ಕಪಿಲ್ ದೇವ್ ಅವರು 1978 ಅ. 1 ರಂದು ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ಕಾಲಿಟ್ಟರು. ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್ ಗಳು ಹಾಗೂ 434 ವಿಕೆಟ್​ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್​ಗಳನ್ನು ಪಡೆದಿದ್ದರು.

error: Content is protected !!