ಮಧ್ಯ ವಯಸ್ಕ‌ ವ್ಯಕ್ತಿಯಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸುಮಾರು ನಾಲ್ಕು ದಿನಗಳ ಹಿಂದೆ 42 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಹುಡುಗಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದು, ಬಾಲಕಿ ಭಯದಿಂದ ಈ ವಿಚಾರವನ್ನು ಯಾರಲ್ಲೂ ಹೇಳಿರಲಿಲ್ಲ. ತಡವಾಗಿ ಪ್ರಕರಣದ ಕುರಿತು, ಹುಡುಗಿಯ ತಂದೆ, ತಾಯಿಗೆ ತಿಳಿದಿದೆ. ವಿಚಾರ ತಿಳಿದು ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯ ಮೇಲೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ‌.

error: Content is protected !!