‘ಕರ್ನಾಟಕ ಪತ್ರಕರ್ತ ನೆನಪಿನ ಸಂಚಿಕೆ’ ಬಿಡುಗಡೆ: ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸರಳ ಸಮಾರಂಭ

       

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 35 ನೇ ರಾಜ್ಯ ಸಮ್ಮೇಳನದ ‘ಕರ್ನಾಟಕ ಪತ್ರಕರ್ತ ನೆನಪಿನ ಸಂಚಿಕೆ’ಯನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸರಳ ಕಾರ್ಯಕ್ರಮ ದಲ್ಲಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮ ದಲ್ಲಿ ಮುಖ್ಯಅತಿಥಿಯಾಗಿ ನಿವೃತ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಭಾಗವಹಿಸಿ ಶುಭ ಹಾರೈಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

35ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ದುಡಿದ ಎಲ್ಲಾ ಸದಸ್ಯರನ್ನು, ಪೋಷಕರಾಗಿ ಸಹರಿಸಿದವರನ್ನು ಹಾಗೂ ಸಹಕಾರ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆಯವರು, ರಾಜ್ಯ ಸರಕಾರ , ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಘಗಳಿಗೂ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭ ರಾಜ್ಯಾಧ್ಯಕ್ಷರನ್ನು ಜಿಲ್ಲಾ ಸಂಘದ ಪರವಾಗಿ ಗೌರವಿಸಲಾಯಿತು.

ಮಂಗಳೂರು‌ ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಸಂಘದ ಜಿಲ್ಲಾ ಪ್ರ. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಜಿಲ್ಲಾ ಉಪಾಧ್ಯಕ್ಷ ಶರತ್ ಕಿನ್ನಿಗೋಳಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಹಿಲರಿ ಕ್ರಾಸ್ತಾ, ಹರೀಶ್ ಮಾಂಬಾಡಿ, ಭಾಸ್ಕರ್ ರೈ ಕಟ್ಟ, ಆತ್ಮಭೂಷಣ್, ಹರೀಶ್ ಮೋಟುಕಾನ, ವಿಜಯ ಕೋಟ್ಯಾನ್, ಕಚೇರಿ ಮೆನೇಜರ್ ಅಭಿಷೇಕ್ ಇದ್ದರು.

error: Content is protected !!