ಬಿ.ಜೆ.ಪಿ. ಎಸ್.ಟಿ. ಮೋರ್ಚಾದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಎಸ್.ಟಿ. ಮೋರ್ಚಾ ಆಶ್ರಯದಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನಡೆಯಿತು.

ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪರ್ಷನೆ ಮಾಡಿ ಮಾತನಾಡಿದ, ಭಾರತೀಯ ಜನತಾ ಪಾರ್ಟಿ ಮಹನೀಯರ ಆದರ್ಶಗಳನ್ನು ಮುಂದಿಟ್ಡುಕೊಂಡು ಸಮುದಾಯಗಳಿಗೆ ಶಕ್ತಿ ನೀಡುವ ಕೆಲಸ ಮಾಡುತ್ತಿದೆ. ಮಹರ್ಷಿ ವಾಲ್ಮೀಕಿ ನಮಗೆ ಆ ದೃಷ್ಠಿಯಿಂದ ಆದರ್ಶಪ್ರಾಯರು ಎಂದರು.
ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್., ವಾಲ್ಮೀಕಿ ಮಹರ್ಷಿಯ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು.
ಮಂಡಲ ಎಸ್. ಟಿ. ಮೋರ್ಚಾ ಅಧ್ಯಕ್ಷ ಹರೀಶ್ ಎಳನೀರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಲಿಂಗಪ್ಪ ನಾಯ್ಕ ಇದ್ದರು.

error: Content is protected !!