ಬೆಳ್ತಂಗಡಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ’

ಬೆಳ್ತಂಗಡಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಮಿತಿ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೇ, ವನ್ಯಜೀವಿ ಇಲಾಖೆ, ಪೊಲೀಸ್ ಇಲಾಖೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಂಯುಕ್ತಾಶ್ರಯದಲ್ಲಿಸಂತೆಕಟ್ಟೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನ.2ರಂದು ಹಮ್ಮಿಕೊಂಡಿದ್ದ ‘ಜಾಗೃತಿ ಅರಿವು ಸಪ್ತಾಹ’ವನ್ನು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಂಘದ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಮೂರ್ತಿ ಬಿ.ಕೆ. ಉದ್ಘಾಟಿಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್. ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ಕೆ.ಜಿ. ಪ್ರತಿಜ್ಷಾವಿಧಿ ಬೋಧಿಸಿದರು.
ಹಿರಿಯ ವಕೀಲರಾದ ಸುಬ್ರಹ್ಮಣ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಸರಕಾರಿ ಸಹಾಯಕ ಅಭಿಯೋಜಕರಾದ ಕಿರಣ್ ಕುಮಾರ್ ಬಿ.ಕೆ., ದಿವ್ಯರಾಜ್, ತಹಸೀಲ್ದಾರ್ ಮಹೇಶ್ ಜೆ., ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರೊಬೆಷನರಿ ಐಪಿಎಸ್ ಅಧಿಕಾರಿ ರೋಹಣ್ ಜಗದೀಶ್, ಬೆಳ್ತಂಗಡಿ ವಲಯ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎಸ್., ಬೆಳ್ತಂಗಡಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಿವಕುಮಾರ್, ಧರ್ಮಸ್ಥಳ ಠಾಣೆ ಪೊಲೀಸ್ ಉಪನಿರೀಕ್ಷಕ ಪವನ್ ನಾಯ್ಕ್, ಪುಂಜಾಲಕಟ್ಟೆ ಠಾಣೆ ಪೊಲೀಸ್ ಉಪನಿರೀಕ್ಷಕಿ ಸೌಮ್ಯ, ಇ.ಒ. ಕುಸುಮಾಧರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಶ್ರೀ ಕೃಷ್ಣ ಶೆಣೈ ಸ್ವಾಗತಿಸಿ, ನಿರೂಪಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ವಂದಿಸಿದರು.

error: Content is protected !!