ಭ್ರಷ್ಟಚಾರಕ್ಕೆ ಕಡಿವಾಣ ಹಾಕಿದರೆ ಮಾತ್ರ ದೇಶದ ಅಭಿವೃದ್ಧಿ: ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೂರ್ತಿ ಹೇಳಿಕೆ

ಬೆಳ್ತಂಗಡಿ: ಜಾಗೃತ ಭಾರತ, ಜಾಗೃತ ಸಮೃದ್ಧಿ ಧ್ಯೇಯದಡಿ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ. ಭ್ರಷ್ಟಾಚಾರ ಎಂಬುದು ಇಂದು ನಿನ್ನೆಯದಲ್ಲ, ಇದಕ್ಕೆ ದೊಡ್ಡ ಇತಿಹಾಸವಿದೆ. ಭ್ರಷ್ಟಚಾರ ಎಂಬ ಪಿಡುಗಿಗೆ ಕಡಿವಾಣ ಹಾಕಿದ್ರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಇದನ್ನು ಹೊಡೆದೋಡಿಸಲು ಎಲ್ಲಾ ಇಲಾಖೆಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಮಾಡಲು ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ನಾಗೇಶ ಮೂರ್ತಿ ಬಿ.ಕೆ. ಅವರು‌ ತಿಳಿಸಿದರು.
ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ವನ್ಯಜೀವಿ ಇಲಾಖೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಸೋಮವಾರ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕಲಾ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮಾತನಾಡಿ, ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿಗೆ ತೊಡಕಾಗಿದೆ. ಸರಕಾರಿ, ಖಾಸಗಿ, ಸಾರ್ವಜನಿಕ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರ ಹರಡಿಕೊಂಡಿದೆ. ಪ್ರತಿಯೊಬ್ಬರೂ ಬದಲಾದರೆ ಮಾತ್ರ ಇದರ ನಿರ್ಮೂಲನೆ ಸಾಧ್ಯ ಎಂದರು.
ಪಾರದರ್ಶಕತೆ ಇಲ್ಲದಿರುವುದು, ಕೆಂಪು ಪಟ್ಟಿಯ ಸಮಸ್ಯೆ ಆರಂಭಕ್ಕೆ ಭ್ರಷ್ಟಾಚಾರ ಕಾರಣವಾಗಿದೆ. ಇದರಿಂದ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವೂ ಪ್ರಮುಖ ಅಡಚಣೆಯಾಗಿದೆ. ಇದರ ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಶಿಯಸ್ ಎಸ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಸತೀಶ ಕೆ.ಜಿ. ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರೊಬೆಶನರಿ ಐಪಿಎಸ್ ಅಧಿಕಾರಿ ರೋಹಣ್ ಜಗದೀಶ್, ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ., ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎಸ್. ಮಾತನಾಡಿದರು.
ವೇದಿಕೆಯಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾದ ಕಿರಣ್ ಕುಮಾರ್ ಬಿ.ಕೆ ಹಾಗೂ ದಿವ್ಯರಾಜ್, ವನ್ಯಜೀವಿ ವಿಭಾಗ ವಲಯ ಅರಣ್ಯಾಧಿಕಾರಿ ಶಿವಕುಮಾರ್, ತಾ.ಪಂ. ಇ.ಒ. ಕುಸುಮಾಧರ್, ಧರ್ಮಸ್ಥಳ ಎಸ್.ಐ. ಪವನ್ ನಾಯ್ಕ್, ಪುಂಜಾಲಕಟ್ಟೆ ಎಸ್.ಐ. ಸೌಮ್ಯ, ವೇಣೂರು ವಲಯ ಅರಣ್ಯಾಧಿಕಾರಿ ಮಹಿಮ್ ಉಪಸ್ಥಿತರಿದ್ದರು. ವ
ಕೀಲರ ಸಂಘದ ಕಾರ್ಯದರ್ಶಿ ಶ್ರೀಕೃಷ್ಣ ಶೆಣೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಧಾಕರ್ ವಂದಿಸಿದರು.

error: Content is protected !!