ಬೆಳ್ತಂಗಡಿ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬ್ಯೂಟೀಶನ್ ಮ್ಯಾನೇಜ್‌ಮೆಂಟ್ (ಮಹಿಳೆಯರಿಗೆ) 30 ದಿನಗಳು 6-11-2020 ರಿಂದ 5-12-2020 ರವರೆಗೆ, ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (30 ದಿನಗಳು)
9-11-2020 ರಿಂದ 8-12-2020
ರವರೆಗೆ ತರಬೇತಿಗಳನ್ನು ಆಯೋಜಿಸಲಾಗಿದೆ.
ಮುಂದಿನ ದಿನಗಳಲ್ಲಿ ಮೊಬೈಲ್ ಫೋನ್ ರಿಪೇರಿ, ಮಹಿಳೆಯರ ಟೈಲರಿಂಗ್, ಫೊಟೋಗ್ರಫಿ ಮತ್ತು ವಿಡಿಯೋಗ್ರಪಿ, ಸಿಸಿ ಕೆಮರಾ ಅಳವಡಿಸಿವಿಕೆ, ಕೃತಕ ಆಭರಣ ತಯಾರಿಕೆ, ಪಪ್ಪಡ್, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ, ಗೃಹ ಉಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ, ರಬ್ಬರ್ ಟ್ಯಾಪಿಂಗ್, ಕಂಪ್ಯೂಟರ್ ಡಿ.ಟಿ.ಪಿ, ದ್ವಿ ಚಕ್ರ ವಾಹನ ರಿಪೇರಿ ಮತ್ತು ಜೇನು ಕೃಷಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ವ್ಯಾಪಾರ ವಹಿವಾಟು, ಸೇವಾ ಕ್ಷೇತ್ರ, ಕೈಗಾರಿಕೆ ಹಾಗೂ ಇನ್ನಿತರ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆ, ಸರಕಾರದ ಸಬ್ಸಿಡಿ ಯೋಜನೆಗಳು, ಬ್ಯಾಂಕಿನಿಂದ ದೊರೆಯುವ ಸೌಲಭ್ಯಗಳು ಹಾಗೂ ಇನ್ನಿತರ ಮಹತ್ವದ ಉದ್ಯಮಶೀಲತಾ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು. ಬಿಪಿಲ್ ಕಾರ್ಡುದಾರರು, ಉದ್ಯೋಗ ಖಾತ್ರಿ ಸದಸ್ಯತ್ವ ಮತ್ತು ಸರ್ಕಾರಿ ಸ್ವ ಸಹಾಯ ಸಂಘುದ ಸದಸ್ಯರುಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಗಳಿಗೆ ಬರಲು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ಬಿಳಿ ಹಾಳೆಯಲ್ಲಿ ಅಥವಾ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ : ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ – 574240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು ಅಥವಾ ಸಂಸ್ಥೆಯ ವೆಬ್‌ಸೈಟ್ ಮೂಲಕ www.rudsetujire.com ಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404
ಗೆ ಸಂಪರ್ಕಿಸಬಹುದು.