ಮಕ್ಕಳ ಕಳ್ಳರು ವದಂತಿ: ಸಂಶಯಿತರು ಕಂಡುಬಂದಲ್ಲಿ ಮಾಹಿತಿ ನೀಡಲು ಮನವಿ

ಧರ್ಮಸ್ಥಳ: ನ. 2 ರಂದು ಸಂಜೆ ಕಬಕ ಪರಿಸರದಲ್ಲಿ ಮಕ್ಕಳ ಕಳ್ಳರು ಬಂದಿರುವುದಾಗಿ ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹರಿಯ ಬಿಡುತ್ತಿದ್ದು,ಇಂತಹ ಸುದ್ದಿಯನ್ನು ಯಾರೂ ಕೂಡ ನಂಬಬಾರದು ಹಾಗೂ ಇದರಿಂದ ಪ್ರಚೋದನೆಗೊಂಡು ಕಾನೂನು ಕೈಗೆತ್ತಿಕೊಂಡು ಅಮಾಯಕರಿಗೆ ಹಲ್ಲೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯದಲ್ಲಿ ತೊಡಗದಂತೆ ಹಾಗೂ ಸುಳ್ಳು ಸುದ್ದಿಯನ್ನು ಸಾಮಾಜಿಕಜಾಲತಾಣದಲ್ಲಿ ಮರು ಪ್ರಸಾರ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮನವಿ ಮಾಡಿಕೊಳ್ಳುತ್ತದೆ. ಇಂತಹ ‌ಪ್ರಕರಣ ಕಂಡು ಬಂದಲ್ಲಿ ಅಂತಹವರ ಮೇಲೆ ನಿಗಾ ಇರಿಸಲಾಗಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧರ್ಮಸ್ಥಳ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಸಂಶಯಿತರು ಯಾರಾದರೂ ಕಂಡುಬಂದಲ್ಲಿ ಪೊಲೀಸ್ ನಿರೀಕ್ಷಕರು, ಪುತ್ತೂರು ನಗರ ಠಾಣೆ 9480805361 ಹಾಗೂ ಜಿಲ್ಲಾ ನಿಯಂತ್ರಣ ಕೊಠಡಿ 08242220508 ಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

error: Content is protected !!