ಕೊಕ್ರಾಡಿ ಆತ್ಮಹತ್ಯೆ ಯತ್ನ ಪ್ರಕರಣ: ತಂದೆ, ಮಗು ಸಾವು

ಕೊಕ್ರಾಡಿ: ಮಗುವಿಗೆ ವಿಷವುಣಿಸಿ, ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ಕೊಕ್ರಾಡಿ ಸಮೀಪ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಗು ಹಾಗೂ ಮಗುವಿನ ತಂದೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಕೊಕ್ರಾಡಿ ಸಮೀಪದ ದಂಪತಿ ತಮ್ಮ ಪುತ್ರಿಗೆ ವಿಷವುಣಿಸಿ, ಬಳಿಕ ತಾವೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ನ.2ರಂದು ಸಂಜೆ ನಡೆದಿತ್ತು. ಕೂಡಲೇ ಸ್ಥಳೀಯರು ಮೂವರನ್ನೂ ಕಾರ್ಕಳದ ಆಸ್ಪತ್ರೆಗೆ ದಾಖಲಿಸಿದರು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ 5 ವರ್ಷ ಪ್ರಾಯದ ಮಗು ಹಾಗೂ ಮಗುವಿನ ತಂದೆ ಮೃತಪಟ್ಟಿರುವ ಮಾಹಿತಿ ಲಭಿಸಿದೆ. ಮಗುವಿನ ತಾಯಿಯ ಸ್ಥಿತಿಯೂ ಗಂಭೀರವಾಗಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!